ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು..!!

0 0
Read Time:2 Minute, 13 Second

ಬೆಂಗಳೂರು: ಗೋ ಮಾಂಸ ಸಾಗಿಸುತ್ತಿದ್ದ ಲಾರಿಗೆ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಬೆಂಕಿ‌ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರದ ಬಳಿ ಸೋಮವಾರ ತಡರಾತ್ರಿ ನಡೆದಿದೆ.

ಐನಾಪುರ ಗ್ರಾಮದ ಬಳಿ ಕುಡಚಿ ಪಟ್ಟಣದಿಂದ ಹೈದರಾಬಾದ್ ಕಡೆಗೆ ಸಾಗುತ್ತಿದ್ದ ನಾಲ್ಕು ಲಾರಿಗಳಲ್ಲಿ ಗೋ ಮಾಂಸ ಸಾಗಾಟ ನಡೆಯುತ್ತಿರುವ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ದೊರಕಿದೆ. ಸೋಮವಾರ ರಾತ್ರಿ ಮಾರ್ಗಮಧ್ಯ ಲಾರಿ ತಡೆದು ಪರಿಶೀಲಿಸಿದಾಗ KA71 2045 ಸಂಖ್ಯೆಯ ಲಾರಿಯಲ್ಲಿ ಅಧಿಕ ಪ್ರಮಾಣದ ಗೋ ಮಾಂಸ ಕಂಡು ಕಾರ್ಯಕರ್ತರು ಲಾರಿಗೆ ಕಲ್ಲು ತೂರಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಅಥಣಿ ಡಿವೈಎಸ್‌ಪಿ ಮತ್ತು ಕಾಗವಾಡ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಲಾರಿಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕಾಗವಾಡ ಪೊಲೀಸ್ ಠಾಣೆಯಲ್ಲಿ‌ ಎರಡು ಪ್ರಕರಣ ದಾಖಲಾಗಿದ್ದು, ಅಕ್ರಮ ಗೋಮಾಂಸ ಸಾಗಿಸುತ್ತಿದ್ದವರ ವಿರುದ್ಧ ಗೋ ಹತ್ಯೆ ನಿಷೇಧ ಕಾಯ್ದೆ ಮತ್ತು ಪ್ರಾಣಿ ಹಿಂಸೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ. ಲಾರಿಗೆ ಬೆಂಕಿ ಹಚ್ಚಿರುವವರ ವಿರುದ್ಧ ದರೋಡೆ ಮತ್ತು ಅಟ್ರಾಸಿಟಿ ಪ್ರಕರಣ ದಾಖಲಾಗಿಸಿಕೊಳ್ಳಲಾಗಿದ್ದು, ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ತನಿಖೆ ತೀವ್ರಗೊಳಿಸಲಾಗಿದ್ದು ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಡಾ.ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *