
Read Time:1 Minute, 5 Second
ಉಡುಪಿ: ಸೌಹಾರ್ದ ಸಹಕಾರ ಸಂಘದ ಆಡಳಿತ ಚುನಾವಣೆಯ ಲೆಕ್ಕ ಪರಿಶೋಧನ ಮಾಡಿಕೊಡಲು ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಇಬ್ಬರು ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಲೋಕಾಯುಕ್ತ ಪೊಲೀಸರು ಅವರನ್ನು ಬಲೆಗೆ ಕೆಡವಿದ್ದಾರೆ.


ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪನಿರ್ದೇಶಕಿ ರೇಣುಕಾ ಮತ್ತು ಪ್ರಥಮ ದರ್ಜೆ ಸಹಾಯಕ ಜಯರಾಮ್ ಬಂಧಿತ ಆರೋಪಿಗಳು. ಇವರು ತಲಾ ಐದು ಸಾವಿರದಂತೆ ಹತ್ತು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಕೈಯ್ಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಇತರ ಪೊಲೀಸರು ಅವರನ್ನು ಬಂಧಿಸಿದ್ದಾರೆ.

