
ಉಡುಪಿ: ಮುಂಬಯಿಯ ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಆನ್‌ಲೈನ್‌ನಲ್ಲಿ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್ ಪೊಲೀಸರು ಗುಜರಾತ್ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.


ಗುಜರಾತ್ ರಾಜ್ಯದ ಸೂರತ್ ಸಿಟಿ ದಭೋಲಿ ರಸ್ತೆಯ ನಿವಾಸಿ ನವಾದಿಯಾ ಮುಖೇಶ್ ಭಾಯಿ/ಗಣೇಶ್ ಭಾಯಿ (44), ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಆಕಾಶವಾಣಿ ಚೌಕ್ ಯೂನಿವರ್ಸಿಟಿ ರಸ್ತೆಯ ನಿವಾಸಿ ಧರಮ್‌ಜೀತ್ ಕಮಲೇಶ್ ಚೌಹಾನ್ (28) ಬಂಧಿತ ಆರೋಪಿಗಳು. ಆರೋಪಿಗಳಿಂದ 5 ಮೊಬೈಲ್ ಫೋನ್‌ಗಳನ್ನು ಹಾಗೂ 13.95 ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ವೈದ್ಯರಾಗಿರುವ ಡಾ| ಅರುಣ್ ಕುಮಾರ್ (53) ಅವರಿಗೆ ಜು. 29ರಂದು ಅಪರಿಚಿತ ವ್ಯಕ್ತಿಗಳು ಫೋನ್ ಕರೆ ಮಾಡಿ ಕಸ್ಟಮ್ಸ್‌ನಿಂದ ಕರೆ ಮಾಡುವುದಾಗಿ ತಿಳಿಸಿ, ನಿಮ್ಮ ಆಧಾರ್ ನಂಬರ್ ಬಳಸಿ ಬುಕ್ ಆಗಿರುವ ಕೊರಿಯರ್‌ನಲ್ಲಿ 5 ಪಾಸ್‌ಪೋರ್ಟ್, 5 ಎಟಿಎಂ ಕಾರ್ಡ್, 200 ಗ್ರಾಂ. ಎಂಡಿಎಂಎ ಹಾಗೂ 5000 ಯುಎಸ್ ಡಾಲರ್‌ವಿದ್ದು, ಕೋರಿಯರ್ ಮುಂಬಯಿಯ ಕಸ್ಟಮ್ಸ್ ಅಧಿಕಾರಿಗಳ ವಶದಲ್ಲಿ ಇರುವುದಾಗಿ ತಿಳಿಸಿ ಹೆದರಿಸಿದ್ದರು.


ಆ ಬಳಿಕ ಪೊಲೀಸ್ ಅಧಿಕಾರಿ ಯೆಂದು ನಂಬಿಸಿ ಡಾ| ಅರುಣ್ ಕುಮಾರ್‌ಗೆ ಕರೆ ಮಾಡಿ, ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆಯ ಬಗ್ಗೆ ದೂರನ್ನು ಸ್ವೀಕರಿಸಲಾಗಿದ್ದು, ಆಧಾರ್ ಕಾರ್ಡ್ ಅನ್ನು ಭಯೋ ತ್ಪಾದಕರು ಸಿಮ್ ಖರೀದಿಸಲು ಬಳಸಿ ದ್ದಾರೆ. ಈ ದೂರಿಗೆ ಸಂಬಂಧಿಸಿ ನಿಮ್ಮನ್ನು “ವರ್ಚುವಲ್‌ನಲ್ಲಿ ಆರೆಸ್ಟ್’ ಮಾಡುವು ದಾಗಿ ಬೆದರಿಕೆ ಹಾಕಿ ದ್ದರು. ಅಲ್ಲದೇ ಜು. 29ರಿಂದ ಆ. 9ರ ವರೆಗೆ ಮನೆಯ ರೂಮ್ ಒಂದರಲ್ಲಿ ಇರುವಂತೆ ಹಾಗೂ ಬೇರೆ ಯವರೊಂದಿಗೆ ಯಾವುದೇ ಸಂಪರ್ಕ ಮಾಡದಂತೆ ಸೂಚಿಸಿದ್ದರು.
