
Read Time:49 Second
ಉಡುಪಿ: ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಗಿರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.


ಮೃತರನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಲೇಖಿರಾಜ್ ಅವರು ಆಯತಪ್ಪಿ ಕಟ್ಟಡದ ೧೪ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.ಯುವಕನ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.