ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

0 0
Read Time:1 Minute, 15 Second

ಉಡುಪಿ: ಹಾಸನ ಮತ್ತು ಸಕಲೇಶಪುರ ವಿಭಾಗಗಳಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲನ್ನು ಓಡಿಸುವ ಅಗತ್ಯವನ್ನು ವಿವರಿಸಿದರು. ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಸಕಲೇಶಪುರ ಘಾಟ್ ವಿಭಾಗದಲ್ಲಿ ರೈಲ್ವೆ ಹಳಿ ವಿದ್ಯುದೀಕರಣ ಪೂರ್ಣಗೊಂಡ ನಂತರ, ಬೆಂಗಳೂರಿನಿಂದ ಕಾರವಾರಕ್ಕೆ ರೈಲು ಸೇವೆಗಳನ್ನು ಸುಧಾರಿಸಲಾಗುವುದು ಮತ್ತು ಈ ಮಾರ್ಗದಲ್ಲಿ ವಂದೇ ಭಾರತ್ ರೈಲನ್ನು ಪರಿಚಯಿಸುವ ಯೋಜನೆಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *