
Read Time:41 Second
ಬಂಟ್ವಾಳ ರೈಲ್ವೆ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಬುಧವಾರ ಸಂಜೆ ವೇಳೆ 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.


ಸ್ಥಳಿಯರು ನೀಡಿರುವ ಮಾಹಿತಿಯಂತೆ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮೇಲಕ್ಕೆತ್ತಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸಾಧಿಸಿದ್ದಾರೆ. ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಘಟನೆಯ ಕುರಿತು ಇನ್ನಷ್ಟು ಮಾಹಿತಿ ಬರಬೇಕಿದೆ.

