ವಾಹನ ಸವಾರರೇ `HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಒಂದೇ ವಾರ ಬಾಕಿ- 1,000 ರೂ.ವರೆಗೆ ದಂಡ

0 0
Read Time:1 Minute, 40 Second

 ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು.

ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು.

ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ.

ಆನ್‌ಲೈನ್ ಮೂಲಕ ಅಳವಡಿಕೆ ಹೇಗೆ?

ಇಲ್ಲಿ ಸ್ಕ್ಯಾನ್ ಮಾಡಿ

. ಎಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ

* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ

* ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *