ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ

0 0
Read Time:2 Minute, 10 Second

ನವದೆಹಲಿ: ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ. ಈ ರೀತಿ ನೀಡಿದ ನೋಟಿಸ್ ಸೇವೆಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಎಂ.ಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಈ ಆದೇಶ ಹೊರಡಿಸಿದ್ದು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1973ರ ಸಿಆರ್‌ಪಿಸಿ ಸೆಕ್ಷನ್ 41-ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ (ಬಿಎನ್‌ಎಸ್‌ಎಸ್) ಸೆಕ್ಷನ್ ೩೫ರ ಅಡಿಯಲ್ಲಿ ಸೂಚಿಸಲಾದ ಸೇವಾ ವಿಧಾನದ ಮೂಲಕ ಮಾತ್ರ ನೋಟಿಸ್‌ಗಳನ್ನು ಹೊರಡಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ.

ಈ ವಿಚಾರವಾಗಿ ಅಮಿಕಸ್ ಕ್ಯೂರಿಯಾಗಿ ಕಾರ್ಯನಿರ್ವಹಿಸಿದ ಹಿರಿಯ ವಕೀಲ ಸಿದ್ದಾರ್ಥ್ ಲೂಡ್ರಾ ಅವರ ಸಲಹೆಯನ್ನು ನ್ಯಾಯಪೀಠ ಪರಿಗಣಿಸಿದೆ ಎನ್ನಲಾಗಿದೆ. ಸಾಮಾನ್ಯ ಸೇವಾ ವಿಧಾನವನ್ನು ಅನುಸರಿಸುವ ಬದಲು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನಗಳ ಮೂಲಕ ನೋಟಿಸ್‌ಗಳನ್ನು ನೀಡುವ ಮೂಲಕ ಪೊಲೀಸರು ಕಾನೂನಿನ ಆದೇಶವನ್ನು ತಪ್ಪಿಸಬಾರದು ಎಂದು ಅವರು ತಿಳಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 532ರ ಅಡಿಯಲ್ಲಿ ಪ್ರಕರಣವೊಂದರ ವಿಚಾರಣೆ ಮತ್ತು ಪ್ರಕ್ರಿಯೆಗಳನ್ನು ಎಲೆಕ್ಟ್ರಾನಿಕ್ ಸಂವಹನ ಅಥವಾ ಆಡಿಯೊ-ವಿಡಿಯೊ ಮೂಲಕವು ನಡೆಸಬಹುದು. ಆದರೆ, ಬಿಎನ್‌ಎಸ್‌ಎಸ್ ಸೆಕ್ಷನ್ 35ರ ಅಡಿಯಲ್ಲಿ ನೋಟಿಸ್ ಅನ್ನು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನಗಳ ಮೂಲಕ ನೀಡಲು ಅನುಮತಿಯಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *