
Read Time:57 Second
ವಿಟ್ಲ: ಮದ್ಯ ಸೇವಿಸಿ ಆಲ್ಟೋ ಕಾರಿನಲ್ಲಿ ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಹಣ ನೀಡದೆ ಸಾಲೆತ್ತೂರು ಮೂಲಕ ಇಬ್ಬರು ಯುವಕರು ಪರಾರಿಯಾಗಿದ್ದು, ಸಮೀಪದ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಮೇ 20ರಂದು ನಡೆದಿದೆ.



ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಅವರಿಗೆ ಗಂಭೀರ ಗಾಯಗಳಾಗಿವೆ.
ಆಲ್ಟೋ ಕಾರಿನಲ್ಲಿದ್ದ ಇಬ್ಬರು ಮದ್ಯವ್ಯಸನಿಗಳಾಗಿದ್ದು, ಹಿಂದಿ ಭಾಷೆ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಕಾರು ಮತ್ತು ಮದ್ಯದ ನಶೆಯಲ್ಲಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.



