
Read Time:1 Minute, 8 Second
ಮಂಗಳೂರು: ರಸ್ತೆಯಲ್ಲಿ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ರಸ್ತೆಗೆ ಬಿದ್ದ ಸವಾರೆ ಮೇಲೆ ಮೀನಿನ ಲಾರಿ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರಿನಲ್ಲಿ ನಡೆದಿದೆ


ಮೃತರನ್ನು ಖಾಸಗಿ ಆಸ್ಪತ್ರೆಯ ಉದ್ಯೋಗಿ ಮಾಧವಿ ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಾಧವಿ ಅವರ ಸ್ಕೂಟರ್ ರಸ್ತೆ ಹೊಂಡಕ್ಕೆ ಬಿದ್ದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಅವರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಮೀನು ತುಂಬಿದ ಟ್ರಕ್ ಅದರ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದರು.
ಮೂಲ್ಕಿಯಿಂದ ಪಂಪ್ವೆಲ್ವರೆಗಿನ ಹೆದ್ದಾರಿಯಲ್ಲಿ ಬರೀ ಗುಂಡಿಗಳೇ ತುಂಬಿಕೊಂಡಿದೆ. ರಸ್ತೆ ದುರಸ್ತಿಗಾಗಿ ಪದೇ ಪದೇ ಮನವಿ ಮಾಡಿದರೂ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಇದೀಗ ರಸ್ತೆ ಗುಂಡಿಯಿಂದಾಗಿ ಮಹಿಳೆ ತಮ್ಮ ಪ್ರಾಣವನ್ನೇ ಕಳೆದುಕೊಳ್ಳಬೇಕಾಗಿ ಬಂದಿದೆ.

