ಯೋಗೀಶ್ ಗೌಡ ಕೊಲೆ ಕೇಸ್: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

0 0
Read Time:1 Minute, 23 Second

ಬೆಂಗಳೂರು, ಜೂನ್​ 13: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್​​ ಕುಲಕರ್ಣಿ ಇಂದು (ಶುಕ್ರವಾರ) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

2016 ರ ಜೂ. 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದ ಯೋಗೀಶಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್​ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು. ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಕೈವಾಡ ಇದೆ ಎಂದು ಆರೋಪಿಸಿ,  ಅವರನ್ನು 2020 ನವೆಂಬರ್ 5 ರಂದು ಸಿಬಿಐ ಬಂಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂಕೋರ್ಟ್​ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *