
Read Time:1 Minute, 18 Second
ಮೂಡುಬಿದಿರೆ : ಸ್ವಂತ ಉದ್ಯಮ ಮಾಡಲು ಸಿದ್ದತೆ ನಡೆಸುತ್ತಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆಯ ರಿಂಗ್ ರೋಡ್ ಬಳಿ ನಡೆದಿದೆ. ಮೂಡುಬಿದಿರೆ ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ಬಳಿ ಕಬ್ಬಿನ ಜ್ಯೂಸ್ ವ್ಯಾಪಾರ ಮಾಡುತ್ತಿರುವ ಶ್ರೀನಿವಾಸ್ ಎಂಬುವವರ ಪುತ್ರ ದೀಕ್ಷಿತ್ (35) ಮೃತಪಟ್ಟ ಯುವಕ.



ಹಲವು ವರ್ಷಗಳ ಕಾಲ ದುಬೈನಲ್ಲಿ ಉದ್ಯೋಗದಲ್ಲಿದ್ದ ದೀಕ್ಷಿತ್, ಒಂದೂವರೆ ವರ್ಷದ ಹಿಂದೆ ತವರಿಗೆ ಮರಳಿದ್ದರು. ಮೂಡುಬಿದಿರೆಯ ರಿಂಗ್ ರೋಡ್ ಬಳಿ ಹೋಟೆಲ್ ಉದ್ಯಮ ಪ್ರಾರಂಭಿಸಬೇಕೆಂಬ ಹಂಬಲ ಹೊಂದಿದ್ದ ಅವರು, ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಶನಿವಾರ(ಜ.17) ಮಧ್ಯಾಹ್ನ, ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮಲಗಿದ್ದ ಸಮಯದಲ್ಲಿ, ಮನೆಯ ಕೋಣೆಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೀಕ್ಷಿತ್ ಅವರ ಈ ತೀವು ನಿರ್ಧಾರಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

